Connect with us

ಇತ್ತೀಚಿನ ಸುದ್ದಿಗಳು

ಬಿ ಪಿ ಎಲ್ ಕಾರ್ಡುದಾರರಿಗೆ ಭರ್ಜರಿ ಸಿಹಿಸುದ್ದಿ… ರಾಜ್ಯದಲ್ಲಿ ಮುಂದಿನ ತಿಂಗಳಿನಿಂದ ‘ಅನ್ನಭಾಗ್ಯ”ಜೊತೆಗೆ ‘ಇಂದಿರಾ ಕಿಟ್’ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

Published

on

ಬೆಂಗಳೂರು: ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಬಿಪಿಎಲ್ (BPL) ಪಡಿತರ ಚೀಟಿದಾರರಿಗೆ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಮುಂದಿನ ತಿಂಗಳಿನಿಂದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯ ಜೊತೆಗೆ ಅಗತ್ಯ ದಿನಸಿ ಪದಾರ್ಥಗಳನ್ನೊಳಗೊಂಡ ‘ಇಂದಿರಾ ಕಿಟ್’ (Indira Kit) ವಿತರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಹೆಚ್. ಮುನಿಯಪ್ಪ, “ಮುಂದಿನ ತಿಂಗಳಿನಿಂದ (ಜೂನ್‌) ಅನ್ನಭಾಗ್ಯ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ಇಲಾಖೆ ಮಟ್ಟದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ ಈ ಪ್ರಕ್ರಿಯೆಗಾಗಿ ಟೆಂಡರ್ ಕರೆಯಲಾಗಿದೆ. ಇದೊಂದು ದೊಡ್ಡ ಯೋಜನೆಯಾಗಿದ್ದು, ಸುಮಾರು ಆರು ಸಾವಿರ ಕೋಟಿ ರೂಪಾಯಿ ಮೊತ್ತದ ಟೆಂಡರ್ ಇದಾಗಿದೆ. ಬಹುತೇಕ ಈ ವಾರದಲ್ಲಿಯೇ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅರ್ಹ ಬಿಡ್‌ದಾರರಿಗೆ ಟೆಂಡರ್ ಅಂತಿಮಗೊಳಿಸಿ ನೀಡಲಾಗುವುದು,” ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ಇಂದಿರಾ ಕಿಟ್? ಇದರಲ್ಲಿ ಏನೆಲ್ಲಾ ಇರಲಿದೆ? ಕರ್ನಾಟಕ ಸರ್ಕಾರವು ಪ್ರಸ್ತುತ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ, ಬಿಪಿಎಲ್ ಪಡಿತರ ಚೀಟಿದಾರರಿಗೆ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನೊಳಗೊಂಡ ‘ಇಂದಿರಾ ಫುಡ್ ಕಿಟ್’ ವಿತರಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಕೇವಲ ಅಕ್ಕಿ ನೀಡುವುದರಿಂದ ದೈನಂದಿನ ಪೌಷ್ಟಿಕಾಂಶದ ಕೊರತೆ ನೀಗುವುದಿಲ್ಲ ಎಂಬ ಉದ್ದೇಶದಿಂದ ಸರ್ಕಾರ ಈ ಹೊಸ ಯೋಜನೆಯನ್ನು ಜಾರಿಗೆ ತರುತ್ತಿದೆ.

ಪ್ರಮುಖವಾಗಿ ಈ ಇಂದಿರಾ ಕಿಟ್‌ನಲ್ಲಿ ಉತ್ತಮ ಗುಣಮಟ್ಟದ ತೊಗರಿಬೇಳೆ, ಸೂರ್ಯಕಾಂತಿ ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಇರಲಿದ್ದು, ಇವುಗಳನ್ನು ರಾಜ್ಯಾದ್ಯಂತ ಇರುವ ನ್ಯಾಯಬೆಲೆ ಅಂಗಡಿಗಳ (ಪಡಿತರ ಅಂಗಡಿ) ಮೂಲಕವೇ ನೇರವಾಗಿ ವಿತರಿಸಲಾಗುತ್ತದೆ.

ಯಾರಿಗೆ ಎಷ್ಟು ಪ್ರಮಾಣದ ಕಿಟ್ ಲಭ್ಯ? ರಾಜ್ಯದಲ್ಲಿರುವ ಒಟ್ಟು 1.26 ಕೋಟಿಗೂ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಈ ಯೋಜನೆಯ ನೇರ ಲಾಭ ಸಿಗಲಿದೆ. ವಿಶೇಷವೆಂದರೆ, ಕುಟುಂಬದ ಸದಸ್ಯರ ಸಂಖ್ಯೆಯ ಆಧಾರದ ಮೇಲೆ ಪ್ರತಿ ತಿಂಗಳು ನೀಡಲಾಗುವ ಕಿಟ್‌ನ ಪ್ರಮಾಣವನ್ನು ವ್ಯವಸ್ಥಿತವಾಗಿ ನಿಗದಿಪಡಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement