ಪುತ್ತೂರು: ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಮೆಸ್ಕಾಂ ಜನ ಸಂಪರ್ಕ ಸಭೆಯು ಮೇ.13ರಂದು ಪೂರ್ವಾಹ್ನ 11 ಗಂಟೆಯಿಂದ 12 ಗಂಟೆಯವರೆಗೆ ಪುತ್ತೂರು ವಿಭಾಗ ಕಚೇರಿಯಲ್ಲಿ ಮಂಗಳೂರು ವೃತ್ತ ಕಛೇರಿ ಅಧೀಕ್ಷಕ ಇಂಜಿನಿಯರ್(ವಿ)ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಗ್ರಾಹಕರು ಪುತ್ತೂರು ಕಾರ್ಯ ಮತ್ತು ಪಾಲನಾ ವಿಭಾಗ ಕಚೇರಿಯ ಸಭಾಂಗಣದಲ್ಲಿ ಮತ್ತು ದೂರವಾಣಿ (ಕಛೇರಿ ಸ್ಥಿರ ದೂರವಾಣಿ ಸಂಖ್ಯೆ 08251-230393) ಮೂಲಕ ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.