Connect with us

ಇತರ

ಬಿಗ್ ಬ್ರೇಕಿಂಗ್ ನ್ಯೂಸ್ ಪೆಟ್ರೋಲ್ ಡೀಸೆಲ್ ದರ ಭಾರಿ ಏರಿಕೆ

Published

on

ನವದೆಹಲಿ: ವಾಹನ ಸವಾರರಿಗೆ ತೈಲ ಕಂಪನಿಗಳು ಬಿಗ್ ಶಾಕ್ ನೀಡಿದ್ದು, ಶುಕ್ರವಾರ (ಮೇ 15) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದಿಢೀರ್ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMCs) ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 3 ರೂಪಾಯಿಗಳಷ್ಟು ಹೆಚ್ಚಿಸಿವೆ. ಈ ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿದ್ದು, ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಇಂಧನ ಬೆಲೆಗಳು ಭಾರಿ ಏರಿಕೆ ಕಂಡಿವೆ.ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಗಳು, ವಿಶೇಷವಾಗಿ ಇರಾನ್ ಬಿಕ್ಕಟ್ಟು ಹಾಗೂ ಹಾರ್ಮುಜ್ ಜಲಸಂಧಿ ಉದ್ವಿಗ್ನತೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಪೂರೈಕೆಯಲ್ಲಿ ಅಡಚಣೆ ಉಂಟಾಗಿದೆ. ಹೀಗಿದ್ದರೂ, ಜಾಗತಿಕ ಇಂಧನ ಬೆಲೆಗಳಲ್ಲಿನ ತೀವ್ರ ಏರಿಕೆಯನ್ನು ಸಂಪೂರ್ಣವಾಗಿ ಸರಿದೂಗಿಸಲು ಅಗತ್ಯವಿದ್ದ ಏರಿಕೆಯ ಕೇವಲ ಹತ್ತನೇ ಒಂದು ಭಾಗದಷ್ಟು ಮಾತ್ರ ಈಗ ಹೆಚ್ಚಳ ಮಾಡಲಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಇಂಧನ ಕೊರತೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ ಇರಾನ್ ಸಂಘರ್ಷದಿಂದಾಗಿ ಜಾಗತಿಕ ಇಂಧನ ಸಾಗಣೆಯಲ್ಲಿ ವ್ಯತ್ಯಯ ಉಂಟಾಗಿದ್ದರೂ, ದೇಶದಲ್ಲಿ ಯಾವುದೇ ಇಂಧನ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪೆಟ್ರೋಲ್, ಡೀಸೆಲ್ ಅಥವಾ ಎಲ್‌ಪಿಜಿಯನ್ನು ಪಡಿತರ ರೂಪದಲ್ಲಿ ನೀಡುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ತೈಲ ಕಾರ್ಯದರ್ಶಿ ನೀರಜ್ ಮಿತ್ತಲ್ ಅವರು ಇತ್ತೀಚೆಗೆ ನಡೆದ ಸಿಐಐ (CII) ವಾರ್ಷಿಕ ವ್ಯಾಪಾರ ಶೃಂಗಸಭೆಯಲ್ಲಿ ಖಚಿತಪಡಿಸಿದ್ದಾರೆ. “ಜನರು ಆತಂಕಪಡುವ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಇಂಧನ ಪೂರೈಕೆ ಇದೆ. ದೇಶದಲ್ಲಿ ಯಾವುದೇ ಪಡಿತರ ವ್ಯವಸ್ಥೆ ಜಾರಿಯಲ್ಲಿಲ್ಲ, ಮತ್ತು ಅದು ಮುಂದೆಯೂ ಆಗುವುದಿಲ್ಲ” ಎಂದು ಅವರು ಅಭಯ ನೀಡಿದ್ದಾರೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತೀವ್ರ ಏರಿಳಿತಗಳು ಮುಂದುವರಿದಿದ್ದರೂ, ಭಾರತವು ಪ್ರಸ್ತುತ ಸುಮಾರು 60 ದಿನಗಳಿಗಾಗುವಷ್ಟು ಇಂಧನ ದಾಸ್ತಾನು ಮತ್ತು ಸುಮಾರು 45 ದಿನಗಳಿಗಾಗುವಷ್ಟು ಎಲ್‌ಪಿಜಿ ದಾಸ್ತಾನು ನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಹೊಸ ದರಗಳ ಪಟ್ಟಿ ಸುದ್ದಿ ಸಂಸ್ಥೆ ಎಎನ್‌ಐ (ANI) ವರದಿಯ ಪ್ರಕಾರ, ಈ ದರ ಏರಿಕೆಯಿಂದಾಗಿ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 ರೂ. ನಿಂದ 97.77 ರೂ.ಗೆ ಏರಿಕೆಯಾಗಿದೆ. ಅಂತೆಯೇ, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 87.67 ರೂ. ನಿಂದ 90.67 ರೂ.ಗೆ ಹೆಚ್ಚಳವಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement