ಪುತ್ತೂರು : ಕೇಂದ್ರ ಸರಕಾರದ ವಿರುದ್ಧ ಶಾಸಕ ಅಶೋಕ್ ಕುಮಾರ್ ರೈ ಯವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಕಾರ್ಯಕರ್ತರೊಂದಿಗೆ ಬಟ್ಟಲು ಬಡಿದು ವಿನೂತನ ಶೈಲಿಯಲ್ಲಿ ಪ್ರತಿಭಟನೆ ಮಾಡಿದ ಶಾಸಕ ರೈ
ಪುತ್ತೂರು: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನಿಂದ ಮೇ.18ರಂದು ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧಿಕಟ್ಟೆಯ ಎದುರು ನಡೆದ ಪ್ರತಿಭಟನೆಯಲ್ಲಿ ಬಟ್ಟಲು ಬಡಿದು ವಿನೂತನ ಶೈಲಿಯಲ್ಲಿ ಪ್ರತಿಭಟನೆ ನಡೆಸಿದರು.
ಕೊರೋನಾ ಅವಧಿಯಲ್ಲಿ ಬಟ್ಟಲು ಬಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಕಾಂಗ್ರೆಸ್ ಪ್ರಧಾನಿಯವರು ಮಿತವ್ಯಯದ ಬಳಕೆ ಹೇಳಿಕೆಯ ವಿರುದ್ಧ ಬಟ್ಟಲು ಬಡಿದು ಪ್ರತಿಭಟನೆ ನಡೆಸಿರುವುದಾಗಿ ಪ್ರತಿಭಟನಾಕಾರರು ತಿಳಿಸಿದರು.
ಶಾಸಕ ಅಶೋಕ್ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಸಂಯೋಜಕ ಕಾವು ಹೇಮನಾಥ ಶೆಟ್ಟಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ ತೌಸೀಫ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಆಲಿ, ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಕಾವು, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಎಂ.ಬಿ ವಿಶ್ವನಾಥ ರೈ, ರಾಜರಾಮ ಕೆ.ಬಿ., ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಉದ್ಯಮಿ ಶಿವರಾಮ ಆಳ್ವ ಸಹಿತ ನೂರಾರು ಮಂದಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು