Published
2 days agoon
By
Akkare News

ಕೊಲೆ ಮಾಡಿ ಪರಾರಿ: ಅಪಹರಣದ ಬಳಿಕ ಇಂದರ್ ಕೌರ್ನನ್ನು ಭೀಕರವಾಗಿ ಕೊಲೆ ಮಾಡಿ, ಶವವನ್ನು ಕಾಲುವೆಗೆ ಎಸೆದ ಸುಖ್ವಿಂದರ್, ತಕ್ಷಣವೇ ಕೆನಡಾಕ್ಕೆ ಪರಾರಿಯಾಗಿದ್ದಾನೆ. ಪೊಲೀಸರ ನಿರ್ಲಕ್ಷ್ಯಕ್ಕೆ ಕುಟುಂಬದ ಆಕ್ರೋಶ ಮೇ 15 ರಂದೇ ಮುಖ್ಯ ಆರೋಪಿ ಸುಖ್ವಿಂದರ್ ಸಿಂಗ್ ಮತ್ತು ಆತನ ಸಹಚರ ಕರಮ್ಜಿತ್ ಸಿಂಗ್ ವಿರುದ್ಧ ಎಫ್ಐಆರ್ (FIR) ದಾಖಲಾಗಿತ್ತು. ಆದರೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳದ ಕಾರಣ ಆರೋಪಿ ದೇಶ ಬಿಟ್ಟು ಓಡಿಹೋಗಲು ಸಾಧ್ಯವಾಯಿತು ಎಂದು ಮೃತರ ಸಹೋದರ ಜೋತಿಂದರ್ ಸಿಂಗ್ ಮತ್ತು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ಪ್ರತಿಕ್ರಿಯೆ: “ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ನಡೆಸಲಾಗುತ್ತಿದೆ” ಎಂದು ಜಮಾಲ್ಪುರ ಪೊಲೀಸ್ ಠಾಣೆಯ ಎಸ್ಎಚ್ಒ ಬಲ್ಬೀರ್ ಸಿಂಗ್ ತಿಳಿಸಿದ್ದಾರೆ.

ಉದಯೋನ್ಮುಖ ಗಾಯಕಿಯ ದುರಂತ ಅಂತ್ಯ ಇಂದರ್ ಕೌರ್ ಪಂಜಾಬಿ ಪ್ರಾದೇಶಿಕ ಸಂಗೀತ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ವೇಗವಾಗಿ ಜನಪ್ರಿಯತೆ ಗಳಿಸುತ್ತಿದ್ದರು. ಅವರ ‘ಸೋನೆ ದಿ ಚಿರ್ಹಿ’, ‘ಜಿಜಾ’, ‘ಸೋಹ್ನಾ ಲಗ್ಡಾ’ ಹಾಡುಗಳು ಸೂಪರ್ ಹಿಟ್ ಆಗಿದ್ದವು. ಸದ್ಯ ಆಕೆಯ ದುರಂತ ಅಂತ್ಯಕ್ಕೆ ಪಂಜಾಬಿ ಸಂಗೀತ ಲೋಕ ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. 



