Published
17 hours agoon
By
Akkare News

ಕಳೆದ ಬಜೆಟ್ ಅಧಿವೇಶನದಲ್ಲಿ ಕೂಡ ಈ ಬಗ್ಗೆ ಶೂನ್ಯ ವೇಳೆಯಲ್ಲಿ ಸದರಿ ವಿಷಯ ಪ್ರಸ್ತಾಪಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಆಗ್ರಹಿಸಲಾಗಿತ್ತು. ಕೇಂದ್ರ ಸರಕಾರವು ಸಂಪೂರ್ಣ ಸ್ವಚ್ಛತಾ ಆಂದೋಲನ (TSC), ನಿರ್ಮಲ್ ಭಾರತ್ ಅಭಿಯಾನ(NBA), ಸ್ವಚ್ಛ ಭಾರತ್ ಮಿಷನ್(SBM) ಮುಂತಾದ ಹಲವಾರು ಯೋಜನೆಗಳ ಮೂಲಕ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ಉತ್ತಮ ಉಪಕ್ರಮಗಳನ್ನು ಕೈಗೊಂಡಿದೆ. ಸ್ವಚ್ಛ ಭಾರತ್ ಮಿಷನ್ ನಡಿ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಘನ ತ್ಯಾಜ್ಯ ಘಟಕವನ್ನು ನಿರ್ಮಿಸಿ ಮನೆಗಳಿಂದ ಒಣ ಮತ್ತು ಹಸಿ ಕಸವನ್ನು ಸಂಗ್ರಹಿಸಲಾಗುತ್ತಿದೆ.

ನಗರ ಪ್ರದೇಶಗಳಲ್ಲೂ ಕಸ ಸಂಗ್ರಹಣೆಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಅದಲ್ಲದೆ ರಾಮಕೃಷ್ಣ ಮಿಷನ್ ಮಂಗಳೂರು ಮತ್ತು ಜನ ಶಿಕ್ಷಣ ಟ್ರಸ್ಟ್ ಮುಡಿಪು ನಂತಹ ಸ್ವಯಂ ಸೇವಾ ಸಂಸ್ಥೆಗಳು ಸಹ ಸ್ವಚ್ಚತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಭಿಯಾನದ ಯಶಸ್ಸಿಗೆ ನಿರಂತರವಾಗಿ ಪ್ರಯತ್ನಿಸುತ್ತಿದೆ.



