Published
4 hours agoon
By
Akkare News



ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ ಕೊಠಡಿಗೆ ತೆರಳಿದರು. ಅಲ್ಲಿಂದ ಸಮ್ಮೇಳನ ಸಭಾಂಗಣಕ್ಕೆ ಮೂವರು ವಾಪಸ್ಸು ಬಂದ ನಂತರ ಶಾಸಕಾಂಗ ಪಕ್ಷದ ನೂತನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು. ನಂತರ ನೂತನ ನಾಯಕ ಡಿ ಕೆ ಶಿವಕುಮಾರ್ ಅವರು ನಿರ್ಗಮಿತ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯ ಸೇವೆಯನ್ನು ಕೊಂಡಾಡುವ ನಿರ್ಣಯ ಮಂಡಿಸಿ, ಸಭೆಯ ಬೆಂಬಲ ಕೋರಿದರು. ಸಭೆ ಒಕ್ಕೋರಲಿನಿಂದ ಬೆಂಬಲಿಸಿತು.



