ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಪುತ್ತೂರು: ಬರ್ಮಾ ದೇಶದಿಂದ ಅಡಿಕೆ ಆಮದಾಗುತ್ತಿರುವುದರಿಂದ ಅಡಿಕೆ ಕೃಷಿಕರು ಸಂಕಷ್ಟಗೊಳಗಾಗುತ್ತಿದ್ದು ತಕ್ಷಣ ಆಮದನ್ನು ನಿಲ್ಲಿಸಲು ಕೇಂದ್ರ ಸರಕಾರಕ್ಕೆ ಸರಕಾರದ ಮೂಲಕ ಒತ್ತಡ ಹಾಕಬೇಕೆಂದು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ ಶಾಸಕ ಅಶೋಕ್ ಕುಮಾರ್ ರೈರವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಬರ್ಮಾದ ಅಡಿಕೆಯನ್ನು ಶಾಸಕರಿಗೆ ಪ್ರದರ್ಶಿಸಿದರು.
ದ.ಕ.ಜಿಲ್ಲೆಯ ಹೆಚ್ಚಿನ ಜನರು ಅಡಿಕೆ ಕೃಷಿಯನ್ನು ಅವಲಂಬಿಸಿಕೊಂಡು ಜೀವನ ಸಾಗಿಸುತ್ತಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಇತ್ತೀಚೆಗೆ ಸುಮಾರು ದಿನಗಳಿಂದ ಅಡಿಕೆ ಬೆಲೆಧಾರಣೆ ದಿನದಿಂದ ದಿನಕ್ಕೆ ಪಾತಾಳಕ್ಕೆ ಕುಸಿಯುತ್ತಿದ್ದು ದ.ಕ.ಜಿಲ್ಲೆ ಸೇರಿದಂತೆ ಅಡಿಕೆ ಬೆಳೆಯುವವರಾಗಿದ್ದು ಈಗ ಧಾರಣೆ ಏರಿಳಿತವು ಕೃಷಿಕರ ಮನಸ್ಸಿನಲ್ಲಿ ಆತಂಕ ಸೃಷ್ಟಿಸಿ ರೈತರಿಗೆ ದಿಕ್ಕು ತೋಚಂದಂತಾಗಿದೆ ಬರ್ಮಾದಿಂದ ಆಮದಾಗುತ್ತಿರುವ ಅಡಿಕೆಯಿಂದ ರೈತಾಪಿ ವರ್ಗದವರು ಕೇಂದ್ರ ಸರಕಾರದ ಈ ಧೋರಣೆಯಿಂದ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.
ಆದುದರಿಂದ ಕೇಂದ್ರ ಸರಕಾರವು ವಿದೇಶದಿಂದ ಅಡಿಕೆ ಆಮದು ಮಾಡುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಸರಕಾರಕ್ಕೆ ಒತ್ತಡ ಹಾಕುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಮನವಿಗೆ ಸ್ಪಂದಿಸಿದ ಅಶೋಕ್ ಕುಮಾರ್ ರೈರವರು ಈ ಬಗ್ಗೆ ಸರಕಾರದ ಗಮನ ಸೆಳೆದು ಸಂಬಂದಪಟ್ಟವರಿಗೆ ವಿವರಿಸಿ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು. ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ ಜೈನ್, ಮುರಳೀಧರ ರೈ ಮಠಂತಬೆಟ್ಟು ನಿರ್ದೇಶಕರಾದ ಸುಬ್ರಹ್ಮಣ್ಯ ಕೊಡಿಪ್ಪಾಡಿ, ನಿರಂಜನ ರೈ ಮಠಂತಬೆಟ್ಟು, ಕೇಶವ ಕೃಪ, ಜಯಪ್ರಕಾಶ್ ಬದಿನಾರು. ವಿಕ್ರಂ ಶೆಟಿ ಅಂತರ, ಶಿವಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.