Published
7 hours agoon
By
Akkare News
ಕರ್ನಾಟಕದ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಲೋಕಭವನದ ಗಾಜಿನ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, 64 ವರ್ಷದ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲರಾದ ತಾವರಚಂದ್ ಗೆಹಲೋತ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು. ಇದರೊಂದಿಗೆ ರಾಜ್ಯದಲ್ಲಿ ನೂತನ ಸರ್ಕಾರದ ಅಧಿಕೃತ ಆಡಳಿತ ಪರ್ವ ಶುರುವಾಗಿದೆ.


2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬೃಹತ್ ಬಹುಮತದೊಂದಿಗೆ ಭರ್ಜರಿ ಜಯ ಸಾಧಿಸಿದ ಬಳಿಕ, ಹಿರಿಯ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ 3 ವರ್ಷಗಳ ಕಾಲ ಆಡಳಿತ ನಡೆಸಿದ್ದರು. ಇದೀಗ ಪಕ್ಷದ ಹೈಕಮಾಂಡ್ ತೀರ್ಮಾನದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ.



