Published
3 hours agoon
By
Akkare News
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಬಂಟ್ ಮತ್ತು ಬಿಲ್ಲವ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಅವರನ್ನು ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 25 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಪೂಜಾರಿ ಅವರು ಅನಿತಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.





