Connect with us

ಯೋಜನೆಗಳು

ಅಡ್ಡ ಮತದಾನ ಮಾಡಿದವರ ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

Published

on

​ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿರುವ ವಿಚಾರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದವರನ್ನು ಪಕ್ಷ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆದಿತ್ತು ಎಂದು ವಿಜಯೇಂದ್ರ ತಿಳಿಸಿದರು. “ನೀವು ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ನಾವು ಬೆಂಬಲಿಸುತ್ತೇವೆ. ಒಟ್ಟಾಗಿ ಸ್ಪರ್ಧಿಸೋಣ ಎಂಬ ಉದ್ದೇಶ ಎರಡೂ ಪಕ್ಷಗಳಲ್ಲಿತ್ತು,” ಎಂದು ಹೇಳಿದರು.

 

​ ಮತದಾನ ಪ್ರಕ್ರಿಯೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎರಡರಲ್ಲಿಯೂ ಅಡ್ಡ ಮತದಾನ ನಡೆದಿರುವ ಮಾಹಿತಿ ಇದೆ. ಇದರಿಂದ ಎರಡೂ ಪಕ್ಷಗಳಿಗೆ ಬೇಸರವಾಗಿದೆ. “ಯಾರು ಅಡ್ಡ ಮತದಾನ ಮಾಡಿರಬಹುದು ಎಂಬ ಬಗ್ಗೆ ಕೆಲವು ಮಾಹಿತಿಗಳು ಲಭ್ಯವಾಗಿವೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಲು ಅವಕಾಶ ಕೋರಿದ್ದೇನೆ. ಅವಕಾಶ ದೊರಕಿದ ಕೂಡಲೇ ಸಂಪೂರ್ಣ ಮಾಹಿತಿ ನೀಡುತ್ತೇನೆ,” ಎಂದು ಹೇಳಿದರು.

​ ಬಿಜೆಪಿ ಟಿಕೆಟ್‌ನಡಿ ಗೆದ್ದು, ಪಕ್ಷದ ನಿಲುವಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಪಕ್ಷ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ವಿಜಯೇಂದ್ರ ಎಚ್ಚರಿಸಿದರು.
ಪಕ್ಷಕ್ಕೆ ನೋವು ತಂದ ಬೆಳವಣಿಗೆ ಈ ಬೆಳವಣಿಗೆ ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟು ಮಾಡಿದೆ ಎಂದು ಹೇಳಿದ ಅವರು, “ಅಭ್ಯರ್ಥಿಯನ್ನು ಕಣಕ್ಕಿಳಿಸುವ ವಿಚಾರವನ್ನು ಉಭಯ ಪಕ್ಷಗಳ ನಾಯಕರು ಚರ್ಚಿಸಿ ನಿರ್ಧಾರ ಮಾಡಿದ್ದರು. ನಮ್ಮ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೂ ಅಡ್ಡ ಮತದಾನ ನಡೆದಿರುವುದು ಬೇಸರ ತಂದಿದೆ. ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು,” ಎಂದರು.

 

Continue Reading
Click to comment

Leave a Reply

Your email address will not be published. Required fields are marked *

Advertisement