Published
3 hours agoon
By
Akkare News
ಬೈಕ್ ಪಾರ್ಕಿಂಗ್ ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ವಿಕ್ಕಿಯನ್ನು ಹೆಚ್ಚಿನ ಚಿಕಿತ್ಸೆಗೆ ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆಯಲ್ಲಿ ಬೈಕ್ ಪಾರ್ಕಿಂಗ್ ವಿಚಾರವಾಗಿ ದಂಪತಿ ಮತ್ತು ನೆರೆಹೊರೆಯವರ ನಡುವೆ ವಾಗ್ವಾದ ನಡೆದಿರುವುದು ಬೆಳಕಿಗೆ ಬಂದಿದೆ. ಈ ವಾಗ್ವಾದ ತೀವ್ರ ಸ್ವರೂಪ ಪಡೆದು, ಆರೋಪಿಗಳು ಚಾಕುವಿನಿಂದ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. 





