Published
9 hours agoon
By
Akkare News
ಬಂಟ್ವಾಳ: ಬಿ.ಸಿ.ರೋಡ್ ನ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಬಳಿ ಬಸ್ ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ (ಜು.16) ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.
ಆರೋಪಿ ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಕ್ಷಣ ಬಾಲಕಿಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.





