Connect with us

ಇತ್ತೀಚಿನ ಸುದ್ದಿಗಳು

ಪುತ್ತೂರು HPR ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿಗೆ MLC ಐವನ್ ಡಿಸೋಜಾ ಭೇಟಿ

Published

on

ಮಂಗಳೂರು : ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಅವರು ಪುತ್ತೂರಿನ HPR ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ, ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಸೌಕರ್ಯವನ್ನು ವೀಕ್ಷಿಸಿದರು.
ಕಳೆದ ಹಲವು ವರ್ಷಗಳಿಂದ ಪುತ್ತೂರು ತಾಲ್ಲೂಕಿನ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಉದ್ಯೋಗದ ಖಾತರಿಯುಳ್ಳ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಶಿಕ್ಷಣವನ್ನು ನೀಡುತ್ತಾ, ಆರೋಗ್ಯ ಕ್ಷೇತ್ರಕ್ಕೆ ಗುಣಮಟ್ಟದ ವೃತ್ತಿಪರರನ್ನು ರೂಪಿಸುವಲ್ಲಿ ಕಾಲೇಜು ಸಲ್ಲಿಸುತ್ತಿರುವ ಸೇವೆಯನ್ನು ಅವರು ಶ್ಲಾಘಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ ಐವನ್ ಡಿಸೋಜಾ ಅವರು, ಕಾಲೇಜಿನ ಶೈಕ್ಷಣಿಕ ಗುಣಮಟ್ಟ, ಶಿಸ್ತು ಮತ್ತು ಸಾಧನೆಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನದಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.
  •  

 
 

Continue Reading
Click to comment

Leave a Reply

Your email address will not be published. Required fields are marked *

Advertisement