Published
56 minutes agoon
By
Akkare News
ಪ್ರಕರಣದ ಮರುತನಿಖೆಗೆ ಸಮ್ಮತಿ ಸೂಚಿಸಿರುವ ಸ್ಯುಪ್ರೀಂ ಕೋರ್ಟ್, ಮರುತನಿಖೆಯನ್ನು ಯಾವ ರೀತಿ ಹಾಗೂ ಯಾವ ಏಜೆನ್ಸಿ ಮೂಲಕ ನಡೆಸಬೇಕು ಎಂಬುದರ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿ ತನ್ನ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ರಾಜ್ಯ ಸರ್ಕಾರವು ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲು ಸಂಪೂರ್ಣ ಸಿದ್ಧವಿರುವುದಾಗಿ ತಿಳಿಸಿದೆ.
ಮತ್ತೊಂದೆಡೆ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇರ ಉಸ್ತುವಾರಿಯಲ್ಲಿಯೇ ಈ ತನಿಖೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ. ತನಿಖಾ ಸಂಸ್ಥೆ ಹಾಗೂ ತನಿಖೆಯ ಸ್ವರೂಪದ ಕುರಿತು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.



