Published
3 hours agoon
By
Akkare News
NEET ಹಗರಣಕ್ಕೆ ಸಂಬಂಧಿಸಿ ಪ್ರತಿಭಟನೆ ಬಳಿಕ ನಡೆದಿರುವ ಮಹತ್ವದ ಬೆಳವಣಿಗೆಯಲ್ಲಿ ಇದೀಗ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಕಳುಹಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ(CJP) ಮತ್ತು ಕೇಂದ್ರದ ನಡುವಿನ ಮೂರನೇ ಸುತ್ತಿನ ಮಾತುಕತೆಗೆ ಕೆಲವೇ ಗಂಟೆಗಳ ಮೊದಲು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಚಾರವನ್ನು ಘೋಷಿಸಿದ್ದಾರೆ. ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ, ದೆಹಲಿಯಲ್ಲಿ ತಮ್ಮ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ತಿಂಗಳ ಸುದೀರ್ಘ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಸಾರ್ವಜನಿಕರ ಒತ್ತಾಯದ ಬಳಿಕ ರಾಜೀನಾಮೆ ಸಲ್ಲಸಿದ ಮೊದಲ ಸಚಿವ ಅವರಾಗಿದ್ದಾರೆ.
ನೀಟ್ ಅಕ್ರಮಕ್ಕೆ ಸಂಬಂಧಿಸಿ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೆಹಲಿಯ ಜಂತರ್ ಮಂತರ್ನಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಬೀಡುಬಿಟ್ಟಿದ್ದ ಕಾಕ್ರೋಚ್ ಜನತಾ ಪಾರ್ಟಿಯ ನೇತೃತ್ವದ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿತ್ತು. ಇದೀಗ ಈಡೇರಿದ್ದು ಮುಂದಿನ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲಕ್ಕೆ ಕಾರಣವಾಗಿವೆ.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸುದ್ದಿ ಬಂದ ಕ್ಷಣ ಜಂತರ್ ಮಂತರ್ನಲ್ಲಿರುವ ಪ್ರತಿಭಟನಾ ಸ್ಥಳವು ಸಂಭ್ರಮಾಚರಣೆ ನಡೆಸಲಾಗಿದೆ. ರಾಜೀನಾಮೆ ಸುದ್ದಿಗೆ ಪ್ರತಿಕ್ರಿಯಿಸಿದ ಸಿಜೆಪಿ, “ವಿದ್ಯಾರ್ಥಿ ಶಕ್ತಿ ಚಿರಾಯುವಾಗಲಿ” ಎಂದು ಪೋಸ್ಟ್ ಮಾಡಿದೆ. “ನಾವು ಅಂದುಕೊಂಡಿದ್ದನ್ನು ಸಾಧಿಸಿದೆವೆು” ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ, ಜಂತರ್ ಮಂತರ್ ವೇದಿಕೆಯಿಂದ ಪ್ರಧಾನ್ ಅವರ ರಾಜೀನಾಮೆ ಸುದ್ದಿಯನ್ನು ಪ್ರಕಟಿಸಿದರು. “ಈ ಸರ್ಕಾರದಲ್ಲಿ ಯಾರೂ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಹೇಳುತ್ತಿದ್ದರು. ಆದರೆ ನಾವು ಅದನ್ನು ಮಾಡಿದ್ದೇವೆ.” ಎಂದರು.
ಶುಕ್ರವಾರ ನಡೆದ ಮಾತುಕತೆಯ ವೇಳೆ ಕೇಂದ್ರ ಸರ್ಕಾರವು ಕೊನೆಯ ಎರಡು ಬೇಡಿಕೆಗಳಿಗೆ ಸಮ್ಮತಿಸಿತ್ತಾದರೂ, ರಾಜೀನಾಮೆ ಬೇಡಿಕೆಯ ಕುರಿತು ಮೌನ ವಹಿಸಿತ್ತು. ಪ್ರಧಾನ್ ಅವರ ರಾಜೀನಾಮೆ ವಿಚಾರವಾಗಿಯೇ ‘ಸಿಜಿಪಿ’ ಮತ್ತು ಕೇಂದ್ರ ಸರ್ಕಾರದ ನಡುವಿನ ಮಾತುಕತೆ ತಡೆಹಿಡಿಯಲ್ಪಟ್ಟಿತ್ತು. ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸದಿದ್ದರೆ ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ಸಿಜಿಪಿ ಶನಿವಾರ ಬೆಳಿಗ್ಗೆ ಸ್ಪಷ್ಟಪಡಿಸಿತ್ತು. ಪ್ರಧಾನ್ ಅವರ ರಾಜೀನಾಮೆಯೊಂದಿಗೆ, ಪ್ರತಿಭಟನಾಕಾರರು ಇಟ್ಟಿದ್ದ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದಂತಾಗಿದೆ.



