Connect with us

ಇತರ

ಪುರುಷರಕಟ್ಟೆ- ಶಾಂತಿಗೂಡು ರಸ್ತೆ ದುರಸ್ತಿಗೆ ಅಗ್ರಹಿಸಿ ನಾಳೆ (ಜು.30) ಪುತ್ತಿಲ ಪರಿವಾರದಿಂದ ಬೃಹತ್ ಪ್ರತಿಭಟನೆ

Published

on

ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಜು.30 ರ ಗುರುವಾರ ಬೆಳಿಗ್ಗೆ 10:00 ಗಂಟೆಗೆ ನರಿಮೊಗರು ಗ್ರಾಮ ಪಂಚಾಯತ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು.

ಮಾಯಂಗಲದಿಂದ ಕೂಡುರಸ್ತೆಯವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಮಳೆಗಾಲದಲ್ಲಿ ಗುಂಡಿಗಳು ಉಂಟಾಗಿ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಮತ್ತು ವಾಹನ ಸವಾರರು ತೀವ್ರ ಸಂಚಾರ ಸಮಸ್ಯೆ ಎದುರಿಸುತ್ತಿದ್ದಾರೆ. ಅಪಘಾತದ ಭೀತಿಯೂ ಇದೆ ಎಂದು ಟ್ರಸ್ಟ್ ಆರೋಪಿಸಿದೆ.ಈ ಕುರಿತು ಜು.23 ರಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗೆ ಮನವಿ ಸಲ್ಲಿಸಲಾಗಿತ್ತು. ಜು.27 ರಂದು ಪ್ರತಿಭಟನೆಗೆ ಮುಂದಾಗಿದ್ದಾಗ ಅಧಿಕಾರಿಗಳು 2 ದಿನ ಕಾಲಾವಕಾಶ ಕೋರಿದ್ದರು. ಆದರೆ ಜು.29 ರೊಳಗೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ತಿಳಿಸಿದೆ.ರಸ್ತೆ ರಿಪೇರಿ ಮನವಿಗೆ ಸ್ಪಂದಿಸದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಸಾರ್ವಜನಿಕರೊಂದಿಗೆ ಸೇರಿ ಧರಣಿ ನಡೆಸುವುದಾಗಿ ಟ್ರಸ್ಟ್ ಪದಾಧಿಕಾರಿಗಳು ಹೇಳಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement