Published
16 hours agoon
By
Akkare News

ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ ವೇಳೆ, ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಐವನ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೆ ಇನ್ನಷ್ಟೇ ಕಾರಣ ತಿಳಿದು ಬರಬೇಕಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸರು ಹಾಗೂ ಸೊಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.




