Published
2 hours agoon
By
Akkare News
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ಆ.3ರಂದು ನಡೆಯಬೇಕಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಿಕೆಯಾಗಿದೆ.

ಪದ್ಮಶ್ರೀ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ಮತ್ತಿತರರನ್ನು ಆಹ್ವಾನಿಸಲಾಗಿದ್ದು ಸಿದ್ಧತೆ ಪೂರ್ಣಗೊಂಡಿತ್ತು. ಆದರೆ ಭಾರೀ ಮಳೆಯಾಗುತ್ತಿರುವ ಕಾರಣ ರೆಡ್ ಅಲರ್ಟ್ ಜಾರಿಯಲ್ಲಿರುವುದರಿಂದ ಕಾರ್ಯಕ್ರಮ ಮುಂದೂಡಲಾಗಿದೆ. ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಕಾಶ್ ಗೌಡ ನೆಕ್ಕಿಲಾಡಿ ತಿಳಿಸಿದ್ದಾರೆ.




