Published
6 hours agoon
By
Akkare News

ಇದರ ಜೊತೆಗೆ ಕರಾವಳಿ ಭಾಗದ ಉಳಿದ ಜಿಲ್ಲೆಗಳು ಸೇರಿದಂತೆ ಒಟ್ಟು ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕೆಲವೆಡೆ ಬಿರುಗಾಳಿ ಕೂಡ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು.
ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲೂ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಮುದ್ರದಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಮಳೆ ತೀವ್ರಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ವಾಹನ ಸವಾರರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.




