Connect with us

ಇತರ

ಸಿಜೆಪಿಗೆ ಕೌಂಟರ್ ಗೆ ಕ್ಷಣಗಣನೆ…..!!!! ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

Published

on

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಸೂರತ್ ಮೂಲದ ಆರ್‌ಟಿಐ (RTI) ಕಾರ್ಯಕರ್ತ ಅಮಿತ್ ತಿವಾರಿ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಪಿಟಿಐ’ (PTI) ವರದಿ ಮಾಡಿರುವ ಪ್ರಕಾರ, ಭಗವಾನ್‌ರಾವ್ ದೀಪ್ಕೆ ಅವರು ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ (MIDC) ಜೂನಿಯರ್ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ತಿಂಗಳಿಗೆ ಸುಮಾರು 60,000 ದಿಂದ 65,000 ರೂಪಾಯಿ ವೇತನ ಪಡೆಯುತ್ತಿದ್ದ ಅವರು, ಅಷ್ಟೊಂದು ಸೀಮಿತ ಆದಾಯದಲ್ಲಿ ತಮ್ಮ ಮಗನನ್ನು ಅಮೆರಿಕದ ಬೋಸ್ಟನ್ ವಿಶ್ವವಿದ್ಯಾಲಯಕ್ಕೆ ಕಳುಹಿಸಿ ಉನ್ನತ ಶಿಕ್ಷಣ ಕೊಡಿಸಲು ಬೇಕಾದ ಬೃಹತ್ ವೆಚ್ಚವನ್ನು ಹೇಗೆ ಭರಿಸಿದರು ಎಂಬ ಪ್ರಶ್ನೆಯನ್ನು ತಿವಾರಿ ಎತ್ತಿದ್ದಾರೆ. ಭಗವಾನ್‌ರಾವ್ ದೀಪ್ಕೆ ಅವರ ಆದಾಯದ ಮೂಲ ಹಾಗೂ ಆಸ್ತಿ-ಪಾಸ್ತಿಗಳ ಕುರಿತು ಶೀಘ್ರ ತನಿಖೆ ನಡೆಯಬೇಕು. ತನಿಖೆಯಲ್ಲಿ ಅವರು ಅಕ್ರಮ ಆಸ್ತಿ ಹೊಂದಿರುವುದು ದೃಢಪಟ್ಟರೆ, ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ದೂರು ಸಲ್ಲಿಸಿದ್ದೇವೆ, ಎಂದು ಅಮಿತ್ ತಿವಾರಿ ತಿಳಿಸಿದ್ದಾರೆ. ಬೋಸ್ಟನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವ ಅಭಿಜೀತ್ ದೀಪ್ಕೆ ಅವರು, CJP ನೇತೃತ್ವದ ಪ್ರತಿಭಟನೆಗಳಲ್ಲಿ ಭಾಗವಹಿಸಲು ಜೂನ್ 6ರಂದು ಭಾರತಕ್ಕೆ ಮರಳಿದ್ದರು. ಸಿಜೆಪಿ ಪರವಾಗಿ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು ಘೋಷಿಸಿರುವ 1 ಕೋಟಿ ರೂಪಾಯಿ ‘ಕಾನೂನು ನೆರವು ನಿಧಿ’ಯ (Legal Aid Fund) ಪಾರದರ್ಶಕತೆ ಕುರಿತೂ ತಿವಾರಿ ಪ್ರಶ್ನಿಸಿದ್ದಾರೆ. ಈ ಕುರಿತು ಅವರು ಭಾರತೀಯ ಚುನಾವಣಾ ಆಯೋಗ (ECI) ಮತ್ತು ಕೇಂದ್ರ ಜಿಎಸ್‌ಟಿ (CGST) ಅಧಿಕಾರಿಗಳಿಗೆ ದೂರು ನೀಡಿದ್ದಾರೆ. “CJP ಇನ್ನೂ ಅಧಿಕೃತವಾಗಿ ನೋಂದಾಯಿತ ರಾಜಕೀಯ ಪಕ್ಷವಲ್ಲದಿದ್ದರೂ, ಸಾರ್ವಜನಿಕವಾಗಿ ರಾಜಕೀಯ ಪಕ್ಷದಂತೆಯೇ ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ, ‘ಜನತಾ ಪ್ರಾತಿನಿಧ್ಯ ಕಾಯ್ದೆ-1951’ರ ಸೆಕ್ಷನ್ 29A ಅಡಿಯಲ್ಲಿ ಅದು ನೋಂದಾಯಿತವಾಗಿದೆಯೇ ಎಂಬುದನ್ನು ಚುನಾವಣಾ ಆಯೋಗ ಪರಿಶೀಲಿಸಬೇಕು. ಒಂದು ವೇಳೆ ನೋಂದಣಿಯಾಗದಿದ್ದರೆ, ಪಕ್ಷದ ಹೆಸರಿನಲ್ಲಿ ಸಂಗ್ರಹವಾಗುತ್ತಿರುವ ನಿಧಿಯ ಮೂಲ ಮತ್ತು ಹಣಕಾಸಿನ ವ್ಯವಹಾರಗಳ ಕುರಿತು ತನಿಖೆ ನಡೆಸಬೇಕು ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ. ಅಲ್ಲದೆ, ಕಾನೂನು ನೆರವಿಗಾಗಿ ಘೋಷಿಸಲಾದ 1 ಕೋಟಿ ರೂ. ನಿಧಿಗೆ ಅನ್ವಯವಾಗುವ ಶೇಕಡಾ 18ರಷ್ಟು ಜಿಎಸ್‌ಟಿಯನ್ನು ಹೇಗೆ ಪಾವತಿಸಲಾಗುತ್ತದೆ ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ. ಆರಂಭದಲ್ಲಿ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ವಿರೋಧಿಸಿ ಆರಂಭವಾದ ಸಿಜಿಪಿ ಪ್ರತಿಭಟನೆಯು, ತದನಂತರ ತನ್ನ ಮೂಲ ಸ್ವರೂಪದಿಂದ ದಾರಿ ತಪ್ಪಿದೆ ಎಂದು ಅಮಿತ್ ತಿವಾರಿ ಆರೋಪಿಸಿದ್ದಾರೆ. ನೀಟ್ ಅಕ್ರಮದ ವಿರುದ್ಧ ಪ್ರತಿಭಟನೆ ನಡೆಸುವವರೆಗೆ ಯಾರಿಗೂ ಯಾವುದೇ ಆಕ್ಷೇಪವಿರಲಿಲ್ಲ. ಆದರೆ, ನಂತರದ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಮೃತ ತಾಯಿಯವರ ಕುರಿತು ತೀರಾ ಅವಹೇಳನಕಾರಿ ಮಾತುಗಳನ್ನು ಆಡಲಾಯಿತು. ಅಲ್ಲದೆ, ವಿದೇಶಿ ನಾಯಕರೊಂದಿಗಿನ ಪ್ರಧಾನಿಯವರ ರಾಜತಾಂತ್ರಿಕ ಸಂಬಂಧಗಳನ್ನು ಕೆಟ್ಟ ರೀತಿಯಲ್ಲಿ ಬಿಂಬಿಸಲಾಯಿತು. ಇಂತಹ ಹಾದಿತಪ್ಪಿದ ನಡೆಗಳ ವಿರುದ್ಧವೂ ನಾವು ದೂರು ನೀಡಿದ್ದೇವೆ,” ಎಂದು ತಿವಾರಿ ‘ಎಎನ್‌ಐ’ (ANI) ಸುದ್ದಿ ಸಂಸ್ಥೆಗೆ ಸ್ಪಷ್ಟಪಡಿಸಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement