Published
5 hours agoon
By
Akkare News

ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ ಗೋಪಾಲಕೃಷ್ಣ, ಕೊನೆಯ ಕ್ಷಣದವರೆಗೂ ಸಚಿವ ಸ್ಥಾನ ಸಿಗುವ ವಿಶ್ವಾಸದಲ್ಲಿದ್ದೆ ಎಂದು ಹೇಳಿದರು.
“ನಿನ್ನೆ ರಾತ್ರಿ ತನಕ ಪಟ್ಟಿಯಲ್ಲಿ ನನ್ನ ಹೆಸರು ಇತ್ತು. ಆದರೆ ಇಂದು ಬೆಳಗ್ಗೆಯೊಳಗೆ ಎಲ್ಲವೂ ಬದಲಾಗಿಬಿಟ್ಟಿತು. ಯಾವ ಕಾರಣಕ್ಕೆ ನನ್ನ ಹೆಸರನ್ನು ಕೈಬಿಡಲಾಯಿತು ಎಂಬುದು ನನಗೆ ಗೊತ್ತಿಲ್ಲ. ಎಲ್ಲ ಹಿರಿಯ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಈ ಬಾರಿ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆ. ಆದರೆ ಕೊನೆಯ ಕ್ಷಣದಲ್ಲಿ ನನಗೆ ಭಾರೀ ನಿರಾಸೆಯಾಗಿದೆ,” ಎಂದು ಅವರು ಬೇಸರ ವ್ಯಕ್ತಪಡಿಸಿದರು.
“ಸಂಪುಟ ವಿಸ್ತರಣೆ ಹೆಸರಿನಲ್ಲಿ ಕೆಲವರಿಗೆ ಮಾತ್ರ ಅವಕಾಶ ನೀಡಲಾಗಿದೆ. ತಮಗೆ ಬೇಕಾದವರನ್ನೇ ಸಚಿವರನ್ನಾಗಿ ಮಾಡಲಾಗಿದೆ. ನಮ್ಮಂತಹ ಹಿರಿಯ ಮತ್ತು ನಿಷ್ಠಾವಂತ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ನನಗೆ ಸ್ಪಷ್ಟವಾಗಿ ಅನ್ಯಾಯವಾಗಿದೆ. ಇದನ್ನು ಸಹಿಸಿಕೊಂಡು ಮುಂದುವರಿಯಲು ಸಾಧ್ಯವಿಲ್ಲ,” ಎಂದು ಅವರು ಹೇಳಿದರು.




