Published
2 hours agoon
By
Akkare News
ಗೃಹ ಜ್ಯೋತಿ’ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಡಿಯಲ್ಲಿ ಉಚಿತ ವಿದ್ಯುತ್ ಪಡೆಯುತ್ತಿರುವ ಇಂತಹ ಫಲಾನುಭವಿಗಳಿಗೆ ಇಂಧನ ಇಲಾಖೆಯಿಂದ ಶಾಕಿಂಗ್ ಸುದ್ದಿ ಎದುರಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯಲ್ಲಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ನೀಡದ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. 
ಫಲಾನುಭವಿಗಳಿಗೆ ಎಚ್ಚರಿಕೆ ಸಂದೇಶ ಸಮೀಕ್ಷೆ ವೇಳೆ ಗ್ರಾಹಕರು ಮನೆಯಲ್ಲಿ ಇಲ್ಲದಿದ್ದರೆ ಅಥವಾ ಮಾಹಿತಿ ನೀಡಲು ನಿರಾಕರಿಸಿದರೆ ಅವರ ಮಾಹಿತಿಯನ್ನು ಸಂಗ್ರಹಿಸಲು ಸಾಧ್ಯ ಆಗುವುದಿಲ್ಲ. ಆದ್ದರಿಂದ ಅವರು ಯೋಜನೆಯ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯದ ಎಲ್ಲಾ ಎಸ್ಕಾಂ ಕಚೇರಿಗಳಲ್ಲಿ ವಿಶೇಷ ಸಮೀಕ್ಷಾ ಶಿಬಿರಗಳನ್ನು ನಡೆಸಲು ಸರ್ಕಾರದ ಅನುಮತಿ ಕೋರಲಾಗಿದೆ.




