Connect with us

ಇತ್ತೀಚಿನ ಸುದ್ದಿಗಳು

ಕಡಬ:ಮನೆಯೊಳಗಿದ್ದ ಫ್ರಿಡ್ಜ್ ಏಕಾಏಕಿ ಭಾರಿ ಸದ್ದಿನೊಂದಿಗೆ ಸ್ಫೋಟ:ಮನೆಗೆ ಹಾನಿ,ಮಹಿಳೆ ಅಪಾಯದಿಂದ ಪಾರು

Published

on

ಕಡಬ: ರಾಮಕುಂಜ ಗ್ರಾಮದ ಅತೂರಿನಲ್ಲಿ ವಿದೇಶದಲ್ಲಿ ಉದ್ಯೋಗದಲ್ಲಿರುವ ಸಿದ್ದಿಕ್ ಎಂಬವರ ಮನೆಯಲ್ಲಿದ್ದ ಫ್ರಿಡ್ಜ್ ಭಾರಿ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಅಪಾರ ಹಾನಿ ಸಂಭವಿಸಿದ ಘಟನೆ ಆಗಸ್ಟ್ 11ರ ಮಂಗಳವಾರ ಸಂಜೆ ನಡೆದಿದೆ. ಘಟನೆ ನಡೆದ ವೇಳೆ ಮನೆಯಲ್ಲಿದ್ದ ಸಿದ್ದಿಕ್ ಅವರ ಪತ್ನಿ ಆರಿಫಾ ಅವರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಫ್ರಿಡ್ಜ್‌ನಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿದೆ ಎನ್ನಲಾಗಿದೆ.

ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಮೇಲ್ಚಾವಣಿ ಹಾಗೂ ಪೀಠೋಪಕರಣಗಳಿಗೆ ತೀವ್ರ ಹಾನಿಯಾಗಿದೆ. ಸ್ಫೋಟದ ಬೆನ್ನಲ್ಲೇ ಮನೆಯೊಳಗೆ ಬೆಂಕಿ ವ್ಯಾಪಿಸಿದ್ದರಿಂದ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಫ್ರಿಡ್ಜ್‌ನಿಂದ ಹೊಗೆ ಹಾಗೂ ಬೆಂಕಿ ಬರುತ್ತಿರುವುದನ್ನು ಗಮನಿಸಿದ ಆರಿಫಾ ಅವರು ಕೂಡಲೇ ಸಮಯಪ್ರಜ್ಞೆ ಮೆರೆದು ಮನೆಯಿಂದ ಹೊರಗೆ ಓಡಿ ಬಂದು ಅಪಾಯದಿಂದ ಪಾರಾಗಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೆಂಕಿ ನಂದಿಸಲು ನೆರವಾಗಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement