Published
3 hours agoon
By
Akkare News
ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಬಗ್ಗೆ ಆ.12 ರಂದು ಬೆಳಗ್ಗೆ ಸುಮಾರು 11.30 ಕ್ಕೆ ಮಂಗಳೂರು ಲೋಕಾಯುಕ್ತ ಡಿ.ವೈ.ಎಸ್.ಪಿ. ಸುರೇಶ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದ ಏಳು ಮಂದಿಯ ತಂಡ ದಾಳಿ ಮಾಡಿ ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿ ಇಲಾಖೆಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಮೂಡಬಿದಿರೆ ತಾಲೂಕು ಕಛೇರಿಗಳ ಮೇಲೆ ಏಕಕಾಲದಲ್ಲಿ ಮಂಗಳೂರು, ಉಡುಪಿ, ಕಾರವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.



