Published
7 hours agoon
By
Akkare News
ಬಂಟ್ವಾಳ : ಅಂಗಡಿಗಳಿಂದ ಹಣ ಸಂಗ್ರಹಿಸಿ ಬೈಕ್ನಲ್ಲಿ ತೆರಳುತ್ತಿದ್ದ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯ ಉದ್ಯೋಗಿಗೆ ತಲವಾರು ತೋರಿಸಿ ₹8.52 ಲಕ್ಷ ನಗದು ಸುಲಿಗೆ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಮುಲ್ಕಾಜೆ ಮಾಡದಲ್ಲಿ ನಡೆದಿದೆ.
ಮಂಗಳೂರಿನ ಕಣ್ಣೂರಿನ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸಿ ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬೈಕ್ನಲ್ಲಿ ತೆರಳುತ್ತಿದ್ದರು.
ಮಧ್ಯಾಹ್ನ ಸುಮಾರು 1 ಗಂಟೆಗೆ ಮುಲ್ಕಾಜೆ ಮಾಡ ಬಳಿ ತಲುಪಿದಾಗ, ಎರಡು ಬೈಕ್ಗಳಲ್ಲಿ ಬಂದ ನಾಲ್ವರು ಅಪರಿಚಿತರು ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಮಯ್ಯದಿ ಅವರ ಬಳಿಯಿದ್ದ ₹8,52,000 ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.



