Connect with us

ಇತರ

ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: ಪಿಕ್‌ಅಪ್ ವಾಹನ ತಡೆದು ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಭಜರಂಗದಳ!

Published

on

ಅಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜಿಡೆಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆಯುತ್ತಿದ್ದ ಅಕ್ರಮ ಗೋ ಸಾಗಾಟವನ್ನು ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ತಡೆದಿದ್ದಾರೆ. ಇಂದು ಮುಂಜಾನೆ ಪಿಕ್‌ಅಪ್ ವಾಹನವೊಂದರಲ್ಲಿ ಕ್ರೂರ ಹಾಗೂ ಅಮಾನುಷ ರೀತಿಯಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಭಜರಂಗದಳದ ಕಾರ್ಯಕರ್ತರು ಜಿಡೆಕಲ್ಲು ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ವೇಳೆ ವಾಹನದಲ್ಲಿದ್ದ ಮೂರು ಹಸುಗಳು ಹಾಗೂ ಒಂದು ಹೋರಿಯನ್ನು ರಕ್ಷಿಸಲಾಗಿದೆ.ಸಾಗಾಟ ನಡೆಸುತ್ತಿದ್ದ ವಾಹನದಲ್ಲಿ ಒಟ್ಟು ಮೂವರು ಆರೋಪಿಗಳಿದ್ದು, ಭಜರಂಗದಳ ಕಾರ್ಯಕರ್ತರು ತಡೆಯುತ್ತಿದ್ದಂತೆ ಇಬ್ಬರು ಪರಾರಿಯಾಗಲು ಯಶಸ್ವಿಯಾಗಿದ್ದಾರೆ. ಆದರೆ ಸ್ಥಳದಲ್ಲಿದ್ದ ಒಬ್ಬ ಆರೋಪಿಯನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಲಾಗಿದೆ. ರಕ್ಷಿಸಲ್ಪಟ್ಟ ಗೋವುಗಳನ್ನು ಹಾಗೂ ವಶಪಡಿಸಿಕೊಂಡ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ

 
 

Continue Reading
Click to comment

Leave a Reply

Your email address will not be published. Required fields are marked *

Advertisement