Published
13 hours agoon
By
Akkare News
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ‘ಕೇರಳ, ಗೋವಾ ರಾಜ್ಯಗಳು ಕರಾವಳಿ ಭಾಗವನ್ನು ಬಳಸಿಕೊಂಡಿರುವ ಮಾದರಿಯಲ್ಲೇ ಕರ್ನಾಟಕದಲ್ಲೂ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಸರ್ಕಾರ ನಿರ್ಧರಿಸಿದ್ದು, ಪ್ರಾಕೃತಿಕ ಸಂಪತ್ತನ್ನು ಸದ್ಬಳಕೆ ಮಾಡಲಾಗುವುದು. ರಾಜ್ಯದ 350 ಕಿ.ಮೀ ಉದ್ದದ ಕರಾವಳಿಯನ್ನು ಸಮೃದ್ಧ ಪರಿಸರ ಪ್ರವಾಸೋದ್ಯಮ ತಾಣವಾಗಿ ರೂಪಿಸಲಾಗುವುದು. ಅದಕ್ಕಾಗಿ ಮಂಗಳೂರಲ್ಲೇ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದ್ದರು.
ಈಗ ಸಂಪುಟ ಸಭೆಯ ದಿನಾಂಕ ನಿಗದಿಯಾಗಿರುವುದರಿಂದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯೂ ಸೇರಿದಂತೆ ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆ ಗರಿಗೆದರಿದೆ. ತುಳುಗೆ ಸ್ಥಾನಮಾನ: ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಹಿಂದಿನ ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪಿಸಿದ್ದೇನೆ. ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸುವುದಾಗಿ ಈ ಹಿಂದಿನ ಮುಖ್ಯಮಂತ್ರಿ ಬಹಿರಂಗವಾಗಿ ಆಶ್ವಾಸನೆ ಕೂಡ ನೀಡಿದ್ದರು. ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳ ಬಗ್ಗೆ ರಾಜ್ಯ ಸರ್ಕಾರ ನೇಮಿಸಿದ ಸಮಿತಿ ಆಂಧ್ರಪ್ರದೇಶಕ್ಕೆ ಹೋಗಿ ಅಧ್ಯಯನ ನಡೆಸಿ ವರದಿಯನ್ನೂ ಸಲ್ಲಿಸಿದೆ’ ಎಂದು ಅವರು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದಾರೆ.



