Published
2 hours agoon
By
Akkare News

ಮಂಗಳೂರು, ಉಡುಪಿ ಮತ್ತು ಉತ್ತರ ಕನ್ನಡ ಭಾಗಗಳ ರೈಲ್ವೆ ಸಂಪರ್ಕ ಹಾಗೂ ಅಭಿವೃದ್ಧಿಯ ನೈಸರ್ಗಿಕ ಕೇಂದ್ರವಾಗಿದೆ. ಈ ಪ್ರದೇಶದ ರೈಲ್ವೆ ಜಾಲವು ವರ್ಷಕ್ಕೆ ₹1,100 ಕೋಟಿಗೂ ಅಧಿಕ ಆದಾಯ ನೀಡುತ್ತದೆ. ಕೊಂಕಣ ರೈಲ್ವೆಯ ಸುಮಾರು 750 ಕಿ.ಮೀ. ಮಾರ್ಗ, ಮಂಗಳೂರು–ಹಾಸನ ರೈಲು ಮಾರ್ಗ, ಎನ್ಎಂಪಿಟಿ ಬಂದರಿನ ಸಂಪರ್ಕ ಹಾಗೂ ಕಂಕನಾಡಿ, ತೊಕ್ಕೊಟ್ಟು, ಪಣಂಬೂರು, ಕುಳಶೇಖರ ಸೇರಿದಂತೆ ಪ್ರಮುಖ ವಾಣಿಜ್ಯ ಕೇಂದ್ರಗಳು ಈ ಪ್ರದೇಶದ ಆರ್ಥಿಕ ಸಾಮರ್ಥ್ಯವನ್ನು ತೋರಿಸುತ್ತವೆ.
ದಿವಂಗತ ಆಸ್ಕರ್ ಫರ್ನಾಂಡಿಸ್ ಅವರು ಪ್ರತ್ಯೇಕ ವಿಭಾಗಕ್ಕಾಗಿ ಸಮಗ್ರ ಯೋಜನೆ ಮತ್ತು ರೂಪುರೇಷೆಯನ್ನು ಸಿದ್ಧಪಡಿಸಿದ್ದರು. ವಿಜಯಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ಗಳ ವಿಲೀನದ ಮೂಲಕ ಕರಾವಳಿಯ ಆರ್ಥಿಕ ಅಸ್ತಿತ್ವಕ್ಕೆ ಧಕ್ಕೆಯಾದಂತೆ, ಈಗ ಮಂಗಳೂರಿನ ರೈಲ್ವೆ ವಿಭಾಗದ ಹಕ್ಕನ್ನೂ ಕಸಿದುಕೊಳ್ಳುವ ಪ್ರಯತ್ನ ನಡೆದಿದೆ. ಇದು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ; ದಕ್ಷಿಣ ಕನ್ನಡ, ಉಡುಪಿ ಮತ್ತು ಕಾರವಾರದ ಜನರ ಹಕ್ಕಿನ ಪ್ರಶ್ನೆಯಾಗಿದೆ. ಇದು ನಮ್ಮ ಪ್ರದೇಶದ ಅಭಿವೃದ್ಧಿ ಮತ್ತು ಯುವಕರ ಭವಿಷ್ಯದ ಪ್ರಶ್ನೆಯಾಗಿದೆ.
ತ್ಯೇಕ ವಿಭಾಗ ಸ್ಥಾಪನೆಯಾದರೆ ಸ್ಥಳೀಯ ಯುವಕರಿಗೆ ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಸಾಧ್ಯತೆ ಇತ್ತು. ಆದರೆ ಈಗ ಉದ್ಯೋಗಕ್ಕಾಗಿ ಯುವಕರು ಬೆಂಗಳೂರು ಮತ್ತು ಮುಂಬೈ ಕಡೆಗೆ ವಲಸೆ ಹೋಗುವ ಪರಿಸ್ಥಿತಿ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಈ ಅನ್ಯಾಯದ ವಿರುದ್ಧ ಮುಂದಿನ ದಿನಗಳಲ್ಲಿ ಜನಾಂದೋಲನ ರೂಪಿಸಲಾಗುವುದು. ಮಂಗಳೂರಿಗೆ ಪ್ರತ್ಯೇಕ ರೈಲ್ವೆ ವಿಭಾಗ ದೊರೆಯುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. 2029ರಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಮಂಗಳೂರಿಗೆ ಪ್ರತ್ಯೇಕ ರೈಲ್ವೆ ವಿಭಾಗ ಸ್ಥಾಪಿಸುವುದು ನಮ್ಮ ಬದ್ಧತೆ.


