Connect with us

ಇತರ

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Published

on

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಸೆ. 10) ಗಂಭೀರವಾಗಿ ಪರಿಗಣಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು, ಇಂತಹ ಆರೋಪಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿತು. ಅಪರಾಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ ಕಾರಣಕ್ಕೆ ಯಾವುದೇ ವ್ಯಕ್ತಿಯನ್ನಾಗಲಿ, ಅವರ ಕುಟುಂಬವನ್ನಾಗಲಿ ಬೆದರಿಸಲು ಅಥವಾ ಬೆದರಿಸಿ ಮೌನವಾಗಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ನ್ಯಾಯಪೀಠ ಒತ್ತಿಹೇಳಿತು. ನಿಶು ಆಜಾದ್ ಹಾಗೂ ಅವರ ಕುಟುಂಬಕ್ಕೆ ನೀಡಲಾಗಿರುವ ಭದ್ರತಾ ವ್ಯವಸ್ಥೆ, ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ಗಳು, ಹಲ್ಲೆ ಹಾಗೂ ಬೆದರಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ಉತ್ತರ ಪ್ರದೇಶ ಮತ್ತು ದೆಹಲಿ ಸರ್ಕಾರಗಳಿಂದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ನಿಶು ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಬಂದಿರುವ ಅಶ್ಲೀಲ ಹಾಗೂ ಬೆದರಿಕೆ ಸಂದೇಶಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡ ಬಳಿಕ ಈ ವಿಷಯ ಮತ್ತಷ್ಟು ಗಮನ ಸೆಳೆದಿದೆ. ನಿಶು ಅವರ ತಂದೆ ಸಂಜಯ್ ಅವರ ಮೇಲೆ ಸಿ.ಜೆ.ಪಿ. ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂದುತ್ವ ಕಾರ್ಯಕರ್ತ ಸ್ವತಂತ್ರ ಭಾರದ್ವಾಜ್ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಪ್ರತಿಭಟನೆ ನಡೆದ ಹಲವು ತಿಂಗಳ ಬಳಿಕ ಪಾಡ್‌ಕಾಸ್ಟ್‌ವೊಂದರಲ್ಲಿ ಭಾರದ್ವಾಜ್ ಈ ಹಲ್ಲೆಯ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದ ವಿಡಿಯೊ ವೈರಲ್ ಆಗಿತ್ತು.
ವಿಡಿಯೊ ವೈರಲ್ ಆದ ಬಳಿಕ ಸಿ.ಜೆ.ಪಿ. ನಿಯೋಗವು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಭೀಮ್ ಪಾರ್ಟಿಯೊಂದಿಗೆ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಮೆರವಣಿಗೆ ನಡೆಸಿ, ಸಂಜಯ್ ಮೇಲಿನ ಹಲ್ಲೆಗಾಗಿ ಭಾರದ್ವಾಜ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿತ್ತು. ಅದೇ ದಿನ, ಈ ಪ್ರಕರಣದ ಕುರಿತು ಮಾತನಾಡಿದ್ದಕ್ಕಾಗಿ ಭಾರದ್ವಾಜ್ ಬೆಂಬಲಿಗರಿಂದ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ನಿಶು ನೀಡಿದ ದೂರಿನ ಆಧಾರದ ಮೇಲೂ ಪೊಲೀಸರು ಮತ್ತೊಂದು ಎಫ್‌ಐಆರ್ ದಾಖಲಿಸಿದ್ದರು.

 
ಎಫ್‌ಐಆರ್‌ಗಳು ದಾಖಲಾದ ಬಳಿಕವೂ ನಿಶು ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಬಂದಿರುವ ಸರಣಿ ಸಂದೇಶಗಳ ಸ್ಕ್ರೀನ್‌ಶಾಟ್‌ಗಳನ್ನು ನಿರಂತರವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಸಂದೇಶಗಳಲ್ಲಿ ಅವಹೇಳನಕಾರಿ ಹಾಗೂ ಅಶ್ಲೀಲ ಭಾಷೆ ಬಳಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, ಅಪರಿಚಿತ ವ್ಯಕ್ತಿಗಳು ತಮ್ಮ ಮನೆಯ ಮೇಲೆ ಕಲ್ಲು ತೂರುತ್ತಿರುವ ದೃಶ್ಯಗಳಿರುವ ವಿಡಿಯೊಗಳನ್ನೂ ಅವರು ಹಂಚಿಕೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement