Published
2 hours agoon
By
Akkare News
ಪೊಲೀಸ್ ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ಉಚಿತ ವ್ಯವಸ್ಥೆ ಮಾಡುವುದಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಹೇಳದೆ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾರ್ನಿಂಗ್ ಕೊಟ್ಟಿದ್ದಾರೆ. 
ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮೈಸೂರಿನ ಕಡೆಯ “ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ..

ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು ? ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅಲ್ಲಿನ ಇನ್‌ಸ್ಪೆಕ್ಟರ್ ಧನಂಜಯ ಅವರು ಆಡಿದ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಬ್ರಿಟಿಷರ ಕಾಲದ ದರ್ಪವನ್ನು ಪೊಲೀಸರು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಲಿ. ಯುವಕರಿಗೆ ಧಮ್ಕಿ ಹಾಕಲು ನೀವ್ಯಾರು, ಇನ್ನೊಮ್ಮೆ ಈ ರೀತಿ ಮಾತನಾಡಿದರೆ ನಾನೇ ನೇರವಾಗಿ ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದಿದ್ದರು. ಅಲ್ಲದೆ ಪೋಲಿಸಪ್ಪಾ, ಮಸೀದಿ ರೋಡಲ್ಲಿ ಹೋದ್ರೆ, ಕುಣಿದ್ರೆ ಗ್ರಹಚಾರ ಬಿಡಿಸ್ತೀರಾ? ಎಂದೂ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದರು.


