Connect with us

ಇತ್ತೀಚಿನ ಸುದ್ದಿಗಳು

ಸತ್ತಿಕಲ್ಲು : ಇದ್ದಿಲು ಸಾಗಾಟದ ಲಾರಿಗೆ ಬೆಂಕಿ

Published

on

ಪುತ್ತೂರು: ಇದ್ದಿಲು ಸಾಗಾಟ ಮಾಡುತ್ತಿದ್ದ ಲಾರಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಹಾನಿಗೊಂಡ ಘಟನೆ ಸೆ.26ರ ರಾತ್ರಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸತ್ತಿಕಲ್ಲು ಎಂಬಲ್ಲಿ ನಡೆದಿದೆ.

ಲಾರಿಯಲ್ಲಿ ಇದ್ದಿಲು ಸಾಗಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಗೆ ಲಾರಿಯನ್ನು ಆವರಿಸಿತು. ಘಟನೆಯಿಂದ ಲಾರಿ ಬಹುತೇಕ ಸಂಪೂರ್ಣವಾಗಿ ಸುಟ್ಟು ಹಾನಿಗೊಂಡಿದೆ.

. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

 

Continue Reading
Click to comment

Leave a Reply

Your email address will not be published. Required fields are marked *

Advertisement