Connect with us

ಅಪಘಾತ

ಮಾಣಿ: ಆಲ್ಟೋ ಕಾರು ಹಾಗೂ ಪಿಕಪ್ ನಡುವೆ ಭೀಕರ ಅಪಘಾತ: ಓರ್ವ ಮಹಿಳೆ ಮೃತ್ಯು

Published

on

ಮಾಣಿ: ಆಲ್ಟೋ ಕಾರು ಹಾಗೂ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಹಳೀರ ಫ್ಲೈಓವರ್ ಸಮೀಪ ನಡೆದಿದೆ. ಮಡಿಕೇರಿ ನಿವಾಸಿ ನಫೀಸಾ (55) ಮೃತಪಟ್ಟವರು ಎಂದು ತಿಳಿದುಬಂದಿದೆ. ಅಪಘಾತಕ್ಕೀಡಾದ ಆಲ್ಟೋ ಕಾರಿನಲ್ಲಿ ಚಾಲಕ ಸೇರಿದಂತೆ ಐವರು ಪ್ರಯಾಣಿಸುತ್ತಿದ್ದರು. ನಾಲ್ವರು ಮಹಿಳೆಯರು ಹಾಗೂ ಚಾಲಕ ಉಮ್ರಾ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಮೂವರು ಮಹಿಳೆಯರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಹಾಗೂ ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಸ್ಥಳೀಯರ ಪ್ರಕಾರ, ಪುತ್ತೂರು–ಮಡಿಕೇರಿ–ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಹಳೀರದ ಸರ್ವಿಸ್ ರಸ್ತೆಯಲ್ಲಿ ಸೂಕ್ತ ಮಾರ್ಗಸೂಚಿ ಹಾಗೂ ಸೂಚನಾ ಫಲಕಗಳ ಕೊರತೆಯಿಂದ ವಾಹನ ಸವಾರರಿಗೆ ಗೊಂದಲ ಉಂಟಾಗುತ್ತಿದೆ. ಕಿರಿದಾದ ಪ್ರವೇಶ ರಸ್ತೆ ಹೊರಗಿನಿಂದ ಬರುವ ವಾಹನ ಸವಾರರಿಗೆ ಸ್ಪಷ್ಟವಾಗಿ ಗೋಚರಿಸದಿರುವುದೂ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಸ್ತೆಯ ಪ್ರವೇಶ ಮಾರ್ಗವನ್ನು ಸುಧಾರಿಸಿ, ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಪಘಾತ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement