Published
14 hours agoon
By
Akkare News
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ಟೆಂಪೊದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 10ಕ್ಕೂ ಅಧಿಕ ಗೋವುಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಅ.5ರಂದು ನಸುಕಿನ ಜಾವ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಿಸಿದ್ದಾರೆ ಬಜರಂಗದಳದ ಕಾರ್ಯಕರ್ತರಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಭಾರಿ ಮಳೆಯ ನಡುವೆಯೇ ಕಾರ್ಯಾಚರಣೆ ನಡೆಸಿದ್ದು, ಬುಳೇರಿಕಟ್ಟೆ ಬಳಿ ಪಿಕಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಿ, ಸೂಕ್ತ ವ್ಯವಸ್ಥೆಯಿಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ ಎಂದು ತಿಳಿದುಬಂದಿದೆ.

ವಾಹನದಲ್ಲಿದ್ದ 10ಕ್ಕೂ ಅಧಿಕ ಗೋವುಗಳನ್ನು ಪೊಲೀಸರು ರಕ್ಷಿಸಿದ್ದು, ಸಾಗಾಟಕ್ಕೆ ಸಂಬಂಧಿಸಿದ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.






