Published
11 hours agoon
By
Akkare News
ಮಂಗಳೂರು: ಮುಲ್ಕಿ ಸಮೀಪ ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ಗೆ ಗಿಡುಗವೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗದ ಗಾಜು ಪುಡಿಪುಡಿಯಾಗಿ, ಓರ್ವರಿಗೆ ಗಾಯವಾದ ಘಟನೆ ನಡೆದಿದೆ.
ಲಕ್ಷ್ಮಿ ಗಣೇಶ್’ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದಾಗ ಗಿಡುಗ ಬಸ್‌ನ ಮುಂಭಾಗಕ್ಕೆ ಬಡಿದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗದ ಗಾಜು ಸಂಪೂರ್ಣವಾಗಿ ಪುಡಿಯಾಗಿದೆ. ಘಟನೆಯಲ್ಲಿ ಓರ್ವರಿಗೆ ಗಾಯವಾಗಿದ್ದು, ಗಾಯದ ತೀವ್ರತೆ ಹಾಗೂ ಗಾಯಾಳುವಿನ ಗುರುತು ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. 






