Published
2 hours agoon
By
Akkare News

ನಮ್ಮ ಪಕ್ಷದವರೇ ಶಾಮೀಲು: ಯತೀಂದ್ರ ಆರೋಪ ಈ ಸ್ಟಿಂಗ್ ವಿಡಿಯೋದಲ್ಲಿ ತಮ್ಮ ಪಕ್ಷದವರೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಒಬ್ಬ ಮಾಧ್ಯಮ ಮುಖ್ಯಸ್ಥರೂ ಸಹ ಇದರಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದನ್ನು ವಿಡಿಯೋ ಸ್ಪಷ್ಟಪಡಿಸುತ್ತದೆ. ಆದರೆ, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಪಕ್ಷವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪುತ್ತೂರು ಟಿಕೆಟ್ ಪಡೆಯುವುದಕ್ಕಾಗಿ ಸ್ಟಿಂಗ್: ಯತೀಂದ್ರ ಸ್ಟಿಂಗ್ ಆಪರೇಷನ್ನ ಹಿಂದಿನ ಉದ್ದೇಶದ ಬಗ್ಗೆ ಮಾತನಾಡಿದ ಯತೀಂದ್ರ, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆಯೊಬ್ಬರು ಪುತ್ತೂರು ಟಿಕೆಟ್ಗಾಗಿ ಆಕಾಂಕ್ಷಿಯಾಗಿದ್ದರು ಎಂಬ ಮಾಹಿತಿ ಇದೆ. ಹಾಗಾಗಿ, ರಾಜಕೀಯ ಲಾಭಕ್ಕಾಗಿ ಮತ್ತು ಸಿದ್ದರಾಮಯ್ಯ ಹೆಸರನ್ನು ಕೆಡಿಸಲು ಈ ರೀತಿಯ ಕೃತ್ಯಕ್ಕೆ ಮುಂದಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಸಿದ್ದರಾಮಯ್ಯ ಘನತೆಯನ್ನು ಹಾಳುಮಾಡಲು, ಅವರ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ಇಡಲು ಮತ್ತು ಬ್ಲಾಕ್ಮೇಲ್ ಮಾಡಲು ಈ ಯತ್ನ ನಡೆದಿದೆ ಎಂದು ಯತೀಂದ್ರ ಆರೋಪಿಸಿದರು.

ಯತೀಂದ್ರ ಮಾತನಾಡಿರುವ ವಿಡಿಯೋ ಇಲ್ಲಿ ನೋಡಿ ಈ ಸುಳ್ಳು ಆರೋಪಗಳಿಂದ ಸಿದ್ದರಾಮಯ್ಯ ಅವರು ತೀವ್ರ ಬೇಸರಗೊಂಡಿದ್ದಾರೆ ಎಂದು ಯತೀಂದ್ರ ತಿಳಿಸಿದರು. 40 ವರ್ಷಗಳ ತಮ್ಮ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ಎಂದಿಗೂ ಇಂತಹ ಕಳಂಕಕ್ಕೆ ಗುರಿಯಾಗಿಲ್ಲ. ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿ ಇಂತಹ ಗಂಭೀರ ಆರೋಪಗಳು ಕೇಳಿಬಂದಾಗ ಯಾರಾದರೂ ಬೇಸರಗೊಳ್ಳುವುದು ಸಹಜ. ಆದರೆ, ಸತ್ಯ ಅವರ ಕಡೆಯಿದೆ, ನಮ್ಮ ಕಡೆಯಿದೆ. ತನಿಖೆಯ ಮೂಲಕ ಸತ್ಯ ಹೊರಬರುತ್ತದೆ ಮತ್ತು ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದರು. ‘ತಂದೆ ಯಾವುದೇ ತಪ್ಪು ಮಾಡಿಲ್ಲ ಎಂದು ತಮ್ಮ ತಾಯಿ ಕೂಡ ದೃಢವಾಗಿ ನಂಬಿದ್ದಾರೆ’ ಎಂದು ಯತೀಂದ್ರ ತಿಳಿಸಿದರು. ಯಾರು ಏನೇ ಆರೋಪ ಮಾಡಿದರೂ, ಸತ್ಯ ಹೊರಬೀಳುವವರೆಗೂ ಎದುರಿಸಲು ಸಿದ್ಧ ಎಂದರು.




