Published
2 hours agoon
By
Akkare News

ಸಾರ್ವಜನಿಕ ಜೀವನದಲ್ಲಿ ಗೌರವಯುತ ಭಾಷೆ ಮತ್ತು ಸಾಮಾಜಿಕ ಜವಾಬ್ದಾರಿ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಪ್ರತಿಯೊಬ್ಬ ನಾಗರಿ ಕನಿಗೂ ಸರ್ಕಾರವನ್ನು ಟೀಕಿಸುವ ಹಕ್ಕಿದೆ. ಆದರೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ವೈಯಕ್ತಿಕ ನಿಂದನೆ, ಅವಹೇಳನಕಾರಿ ಭಾಷೆ ಬಳಕೆ ಮಾಡಿದರೆ ಅದನ್ನು ಸಮರ್ಥಿಸಲು ಸಾಧ್ಯವಿಲ್ಲ. ರಾಜಕೀಯ ಭಿನ್ನಾಭಿಪ್ರಾಯಗಳು ಆರೋಗ್ಯಕರ ಚರ್ಚೆಯ ಮೂಲಕವಾಗಬೇಕು. ಧನ್ವೀರ್ ಹೇಳಿಕೆಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಎನ್ಎಸ್ಯುಐ ಜಿಲ್ಲಾ ಸಮಿತಿ ಅಧ್ಯಕ್ಷ ಸುಹಾನ್ ಆಳ್ವ, ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ಶಾನ್ ಸಿರಿ, ಕೀರ್ತನ್ ಕೊಡಪಾಲ, ಮುಖಂಡರಾದ ಕೌಶಿಕ್, ಸುಶಾನ್ ಹಾಗೂ ಏತಾನ್ ಹಾಜರಿದ್ದರು.






