ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಇವುಗಳ ಸಹಯೋಗದೊಂದಿಗೆ ತುಂಬೆ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 27-10-2026ರಂದು ನಡೆದ ವಿಶೇಷ ಚೇತನ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಮನ್ವಿತ್ ಜಾವೆಲಿನ್ ನಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಹಾಗೂ ಭಾವನಾ 50 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.
ಶಾಲಾ ಪ್ರಭಾರ ಉಪಪ್ರಾಂಶುಪಾಲರಾದ ನಾಗರಾಜ್ ಭಟ್ ಇವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಗೀತಾಂಜಲಿ ಇವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.