ದಿನಾಂಕ : 01-11-2026 ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ಆರೋಪಿತರಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಸೀಮಾ ಎಂಬಾಕೆಯ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ಪೂರೈಕೆಯ ಜಾಲದ ಬಗ್ಗೆ ತನಿಖೆಯನ್ನು ಕೈಗೊಂಡು, ಆರೋಪಿತೆಯು ವಾಸ್ತವ್ಯವಿದ್ದ ಪಂಪ್ ವೆಲ್ ಉಜ್ಜೋಡಿಯ ಹತ್ತಿರ ರಾಧಾ ರೆಸಿಡೆನ್ಸಿ ಎಂಬ ಅಪಾರ್ಟ್ ಮೆಂಟ್ ಕಟ್ಟಡದ, ಒಂದನೇ ಮಹಡಿಯಲ್ಲಿರುವ ಫ್ಲ್ಯಾಟ್ ನಂಬ್ರ 103 ರಲ್ಲಿ ಶೋದ ನಡೆಸಿ ಸುಮಾರು 15,30,000/(ಹದಿನೈದು ಲಕ್ಷದ ಮೂವತ್ತು ಸಾವಿರ ) ಮೌಲ್ಯದ 153. ಗ್ರಾಂ MDMA ಯನ್ನು ಸ್ವಾದೀನ ಪಡಿಸಿಕೊಂಡಿರುವುದಾಗಿದೆ.
ಆರೋಪಿತೆಯು ಮಂಗಳೂರು ನಗರದಾದ್ಯಂತ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದುದಾಗಿ, ವಿಚಾರಣೆಯ ವೇಳೆ ತಿಳಿದು ಬಂದಿರುತ್ತದೆ. ಆರೋಪಿತೆಯನ್ನು ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸುತ್ತದೆ. ಈ ಪ್ರಕರಣದಲ್ಲಿ ಇನ್ನು ಕೆಲವು ಆರೋಪಿಗಳು ಭಾಗಿಯಾಗಿದ್ದು,, ಅವರುಗಳ ದಸ್ತಗಿರಿ ಬಾಕಿ ಇರುತ್ತದೆ.
ಪ್ರಕರಣದಲ್ಲಿ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.