Connect with us

ಇತ್ತೀಚಿನ ಸುದ್ದಿಗಳು

ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ದೀಪಾವಳಿ ಪ್ರಯುಕ್ತ ಚಿನ್ನಾಭರಣ, ವಜ್ರದ ಆಭರಣ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

Published

on

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಗ್ರಾಹಕರಿಗೆ ದೀಪಾವಳಿ ಹಬ್ಬದ ಸಂತೋಷವನ್ನು ಇಮ್ಮಡಿಗೊಳಿಸಲು “ದೀಪಾವಳಿ ವಿಶೇಷ ಕೊಡುಗೆಯನ್ನು ಸಂಸ್ಥೆ ಪ್ರಕಟಿಸಿದೆ. ನವೆಂಬರ್ 5ರಿಂದ 11ರವರೆಗೆ ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ 30% ನೇರ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ರೂ.8000/- ನೇರ ರಿಯಾಯಿತಿ ಅಲ್ಲದೆ ಬೆಳ್ಳಿಯ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ರೂ.8000/- ನೇರ ರಿಯಾಯಿತಿ ನೀಡಲಾಗುವುದು.

ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ನಗದು ಪಾವತಿಸಿ ಚಿನ್ನಾಭರಣ ಖರೀದಿಸಲು ಬಯಸುವ ಗ್ರಾಹಕರಿಗೆ ಇದು ಅತ್ಯಂತ ಸೂಕ್ತ ಸಮಯವಾಗಿದ್ದು, ಚಿನ್ನ ಖರೀದಿಸಲು ಇದೊಂದು ಸುವರ್ಣಾವಕಾಶವಾಗಿದೆ.ಯಾವುದೇ ಜ್ಯುವೆಲ್ಲರ್ಸ್‌ನಿಂದ ಖರೀದಿಸಿದ ಹಳೆಯ 91.6% ಚಿನ್ನಾಭರಣಗಳ ಎಕ್ಸ್‌ಚೇಂಜ್ ದರದ ಮೇಲೆ 0% ಕಡಿತ.ಹಬ್ಬದ ಸಂದರ್ಭದಲ್ಲಿ ಹೊಸ ವಿನ್ಯಾಸದ ಚಿನ್ನ, ವಜ್ರ ಹಾಗೂ ಬೆಳ್ಳಿ ಆಭರಣಗಳನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ಈ ಕೊಡುಗೆ ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಹಾಗೂ ಈ ದೀಪಾವಳಿ ವಿಶೇಷ ಆಫರ್ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement