Connect with us

ಇತರ

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಡಿಸೆಂಬರ್ 7 ರಿಂದ ಕಲಾಪ ಆರಂಭ

Published

on

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ 10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 7 ರಿಂದ 10 ದಿನಗಳ ಕಾಲ ಕಲಾಪ ನಡೆಯುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮಂಗಳವಾರ ತಿಳಿಸಿದ್ದಾರೆ.

ಈ ಕುರಿತು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ.

ಅಕ್ಟೋಬರ್ 15, 2026 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದಂತೆ, ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7, 2026 ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಇದರನ್ವಯ, ಡಿಸೆಂಬರ್ 7 ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ 10 ದಿನಗಳ ಅಧಿವೇಶನವನ್ನು ನಡೆಸಲು ಅಗತ್ಯವಿರುವ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ” ಎಂದು ಶಾಲಿನಿ ರಜನೀಶ್ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯು ಈ ಪತ್ರವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement