Published
2 days agoon
By
Akkare News
ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೋ ವಿಮಾನ ಟೇಕ್ ಆಫ್ ಆಗುವ ಸಂದರ್ಭದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಪೈಲಟ್ ವಿಮಾನವನ್ನು ನಿಲ್ಲಿಸುವ ಮೂಲಕ ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.
ವರದಿಯ ಪ್ರಕಾರ, ವಿಮಾನದಲ್ಲಿ 229 ಪ್ರಯಾಣಿಕರು ಹಾಗೂ 7 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಮಂದಿ ಇದ್ದರು. ಸಂಜೆ 6:05ಕ್ಕೆ ಟೇಕ್ ಆಫ್ ಆಗಬೇಕಿದ್ದ ವಿಮಾನ ರನ್‌ವೇಯಲ್ಲಿ ಚಲಿಸುತ್ತಿದ್ದ ವೇಳೆ ಇಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ.
ತಕ್ಷಣ ವಿಮಾನವನ್ನು ನಿಲ್ಲಿಸಿದ ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ನಂತರ ಇಂಡಿಗೋ ಸಂಸ್ಥೆಯು ಪ್ರಯಾಣಿಕರ ಪ್ರಯಾಣಕ್ಕಾಗಿ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿದೆ ಎಂದು ವರದಿಯಾಗಿದೆ. ಪೈಲಟ್‌ನ ಸಮಯಪ್ರಜ್ಞೆ ಹಾಗೂ ತ್ವರಿತ ನಿರ್ಧಾರದಿಂದ ನೂರಾರು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.






