ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ, ಜಿಲ್ಲೆಗಳಲ್ಲಿ ಕೋರ್ಬಿವ್ಯಾಕ್ಸ್ 19 ಲಸಿಕೆಯನ್ನು ಪ್ರತೀ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಲಭ್ಯ.

Published

on

ಮಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ವೆನ್ಹಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಕೋವಿಡ್ 19 ಲಸಿಕೆಯನ್ನು ಪ್ರತೀ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೀಡಲಾಗುತ್ತಿದೆ.

ಸಾರ್ವಜನಿಕರು https://www.cowin.gov.in/ಮೂಲಕ ನೋಂದಾಯಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement