ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣ . ರಾಜ್ಯಾದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಆರೋಗ್ಯ ಇಲಾಖೆ ದಾಳಿ

Published

on

ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ದಾಳಿ ನಡೆಸಿದ ವೇಳೆ ಮತ್ತೊಂದು ಭಯಾನಕ ವಿಷಯ ಹೊರ ಬಿದ್ದಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆಯಿಂದ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಅಧಿಕಾರಿಗಳು ಸಿಸ್ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರಗಳಿಗೆ ಆರೋಗ್ಯ ಇಲಾಖೆ ನೋಟಿಸ್ ಜಾರಿಗೊಳಿಸಿದೆ.ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.


ಬೆಂಗಳೂರು ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ನಡೆದಂತಹ ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್ ಗಳ ಕಳ್ಳಾಟ ಹೊರ ಹಾಕಲು ಇಲಾಖೆ ಮುಂದಾಗಿತ್ತು.ಮೈಸೂರಿನ ಪ್ರಕರಣ ಬಯಲಾಗುತ್ತಿದ್ದಂತೆ ಅಧಿಕಾರಿಗಳು ರಾಜ್ಯಾದ್ಯಂತ ದಾಳಿಗೆ ಮುಂದಾಗಿದ್ದರು. ಡಿಸೆಂಬರ್ 31ರ ಒಳಗೆ ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.ಅಕ್ರಮ ಸ್ಕ್ಯಾನಿಕ್ ಸೆಂಟರ್ ವಿರುದ್ಧ ಕ್ರಮವಹಿಸಿ ವರದಿ ನೀಡಲು ಎಲ್ಲಾ ಡಿಎಚ್‌ಓ ಹಾಗೂ ಸಿ ಹೆಚ್ ಓ ಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿತ್ತು. ಎಲ್ಲ ಸ್ಕ್ಯಾನಿಂಗ್ ಸೆಂಟರ್ ಮೇಲ್ ದಾಳಿ ಪರಿಶೀಲನೆ ನಡೆಸಿ ಈಗಾಗಲೇ ಅಧಿಕಾರಿಗಳು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿವೆ.ಜೊತೆಗೆ ಅಧಿಕಾರಿಗಳ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟು 583 ಸ್ಕ್ಯಾನಿಕ್ ಸೆಂಟರ್ ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement