ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ನೆಲ್ಯಾಡಿ: ಸಹಕಾರ ಸಂಘಕ್ಕೆ 916 ಹಾಲ್ ಮಾರ್ಕ್ ಇರುವ ನಕಲಿ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚನೆ; ವ್ಯವಸ್ಥಾಪಕಿಯಿಂದ ಪೊಲೀಸರಿಗೆ ದೂರು

Published

on

ನಕಲಿ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವುದಾಗಿ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಹೆಚ್. ಎಂಬವರು ನೀಡಿದ ದೂರಿನ ಮೇರೆಗೆ ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡಾನಿಶ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳಾದ ನೆಲ್ಯಾಡಿ ಗ್ರಾಮದ ನಿವಾಸಿ ಸೆಬಾಸ್ಟಿಯನ್ ಮತ್ತು ಕೇರಳ ಮೂಲದ ಡಾನಿಶ್ ಎಂಬವರು ಜ.27ರಂದು ಮಧ್ಯಾಹ್ನ ಮೇಲ್ನೋಟಕ್ಕೆ ನಕಲಿ ಎಂದು ಕಂಡುಬಾರದಂತಹ 916 ಹಾಲ್ ಮಾರ್ಕ್ ಇರುವ ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡವಿಟ್ಟು, ಸಹಕಾರ ಸಂಘದಿಂದ ರೂ.1.40 ಲಕ್ಷ ಪಡೆದು ಮೋಸ ಮಾಡಿರುತ್ತಾರೆ ಎಂದು ದೂರು ನೀಡಿದ್ದಾರೆ.





ದೂರಿನಂತೆ ಆರೋಪಿಗಳ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 16/2024 ಕಲಂ: 406,420, ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಹಲವು ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ಈ ರೀತಿಯಾಗಿ ಕೃತ್ಯ ಎಸಗಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಹೆಚ್ಚಿನ ಮಾಹಿತಿ ತನಿಖೆಯ ನಂತರ ತಿಳಿದು ಬರಬೇಕಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement