Published
10 months agoon
By
Akkare Newsಮಂಗಳೂರು : ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಅಧಿವೇಶನದಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.