Published
10 months agoon
By
Akkare Newsಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ ಆದಿರಾ. ಈಕೆ ಮೂಡುಬಿದಿರೆಯ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದು, ವಿದ್ಯಾಗಿರಿಯಲ್ಲಿರುವ ಶಾಂಭವಿ ಹಾಸ್ಟೆಲ್ ನ ಸಿ. ವಿಭಾಗದಲ್ಲಿ ವಾಸ್ತವ್ಯವಿದ್ದಳು.
ಈಕೆಯು ಕಾಲೇಜಿನ ಬಕ್ಸ್ ನಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ಫೆಬ್ರವರಿ 23 ಶುಕ್ರವಾರದಂದು ಬೆಳಿಗ್ಗೆ 7-45 ಕ್ಕೆ ಹಾಸ್ಟೆಲ್ ನಿಂದ ಬಂದು ಮೂಡುಬಿದಿರೆ ಕನ್ನಡಭವನದ ಬಳಿ ಇಳಿದು ಹೋದಾಕೆ ಕಾಲೇಜಿಗೂ ಹೋಗದೆ, ಹಾಸ್ಟೆಲ್ ಗೂ ಹೋಗದೆ, ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳು.ಇದೀಗ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಎಂಬಂತೆ ಆದಿರಾ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾಳೆ. ಈಕೆ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಕೇರಳಕ್ಕೆ ತೆರಳಿ ಮದುವೆಯಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ ಎಂದು ತಿಳಿದು ಬಂದಿದೆ.