Published
10 months agoon
By
Akkare Newsರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್‌ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು , ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ರಾಜ್ಯದಲ್ಲಿ ಈ ವರ್ಷದ ಮೊದಲ ಮಳೆಯಾಗಲಿದ್ದು ಬಿಸಿಲಿನ ಬೇಗೆಯಿಂದ ಮುಕ್ತಿ ನೀಡಲಿದೆ.
ಇನ್ನೂ , ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರಗಳಲ್ಲೂ ಮುಂಬರುವ ತಿಂಗಳ ಮೊದಲ ವಾರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.