ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಇಂದು(ಮಾ.26) ಉದ್ಘಾಟನೆPublished
9 months agoon
By
Akkare Newsಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಚುನಾವಣಾ ಪ್ರಚಾರ ಕಚೇರಿಯನ್ನು ಇಂದು (ಮಾ.26) ಬೆಳಗ್ಗೆ 9.30ಕ್ಕೆ ಕೇಂದ್ರದ ಮಾಜಿ ಸಚಿವ, ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ.
ನಗರದ ಎಂ.ಜಿ. ರಸ್ತೆಯ ಲಾಲ್ಬಾಗ್ನಿಂದ (ಮಹಾನಗರಪಾಲಿಕೆ ಕಟ್ಟಡದ ಬಲಭಾಗದ ರಸ್ತೆ) ಮಣ್ಣಗುಡ್ಡೆಗೆ ತೆರಳುವ ರಸ್ತೆ ಸಮೀಪ ನೂತನ ಚುನಾವಣಾ ಕಚೇರಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ರೈ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ. ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿಸೋಜ, ಅಭಯಚಂದ್ರಜೈನ್, ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,
ಮಾಜಿ ಶಾಸಕರಾದ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್ಎಸ್ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.