ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಜೆಡಿಎಸ್ -ಬಿಜೆಪಿ ಮೈತ್ರಿಗೆ ವಿರೋಧ:ಸುಳ್ಯದ ಹಲವು ಮಂದಿ ಜಿಲ್ಲಾ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆPublished
8 months agoon
By
Akkare Newsಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ. ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರುಪಕ್ಷದ ಬಾವುಟ ನೀಡಿ ಅವರನ್ನು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ವಿನಯ ಕುಮಾರ್ ಸೊರಕೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಕರೆ ನೀಡಿದರು.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಎಲಿಮಲೆ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಸುಳ್ಯ ನ.ಪಂ.ಸದಸ್ಯ ಕೆ.ಎಸ್.ಉಮ್ಮರ್ ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್, ಮುಖಂಡರಾದ ಜಿ.ಕೃಷ್ಣಪ್ಪ, ಸದಾನಂದ ಮಾವಜಿ ಸೇರಿ ಸುಳ್ಯದ ಪ್ರಮುಖರು ಉಪಸ್ಥಿತರಿದ್ದರು.